ಧರ್ಮೋಪದೇಶಕಾಂಡ 21:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು. ಅಧ್ಯಾಯವನ್ನು ನೋಡಿ |