Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ, ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟದ ಹಾಗು ಯಾವ ಕೆಲಸವನ್ನೂ ಮಾಡದ ಒಂದು ಕಡಸನ್ನು ತೆಗೆದುಕೊಳ್ಳಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟಲ್ಪಡದೆಯೂ ಯಾವ ಕೆಲಸವನ್ನೂ ಮಾಡದೆಯೂ ಇರುವ ಒಂದು ಮಣಕವನ್ನು ತೆಗೆದುಕೊಂಡು ಎಂದಿಗೂ ವ್ಯವಸಾಯವಿಲ್ಲದಂಥ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹತನಾದವನಿಗೆ ಸಮೀಪವಾದ ಊರು ಯಾವುದೋ, ಆ ಊರಿನ ಹಿರಿಯರು ಇನ್ನೂ ಕೆಲಸ ಮಾಡದಂಥ, ನೊಗ ಎಳೆಯದಂಥ, ಒಂದು ಕಡಸನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:3
8 ತಿಳಿವುಗಳ ಹೋಲಿಕೆ  

“ಯೆಹೋವನಾದ ನಾನು ಒಂದು ನಿಯಮವನ್ನು ನೇಮಿಸಿದ್ದೇನೆ, ಅದೇನೆಂದರೆ: ಎಂದೂ ನೊಗವನ್ನು ಹೊರದ ಮತ್ತು ಯಾವ ದೋಷವಿಲ್ಲದ ಪೂರ್ಣಾಂಗವಾದ ಕೆಂದಾಕಳನ್ನು ನಿಮಗೆ ತಂದುಕೊಡಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.


ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.


ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.


ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.


ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿಸಿರಿ. ಅದಕ್ಕೆ ಹಾಲು ಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿರಿ


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು