Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷವಿುಸಬೇಕು; ಅನ್ಯಾಯವಾದ ನರಹತ್ಯದೋಷಫಲವು ನಿನ್ನ ಜನರಾದ ಇಸ್ರಾಯೇಲ್ಯರಿಗೆ ತಗಲದಿರಲಿ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:8
13 ತಿಳಿವುಗಳ ಹೋಲಿಕೆ  

ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.


ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.


“ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.


ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು