Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಸ್ವದೇಶದವನ ಎತ್ತಾಗಲಿ, ಕುರಿ ಆಗಲಿ ದಾರಿತಪ್ಪಿಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸ್ವದೇಶದವನ ಎತ್ತಾಗಲಿ ಕುರಿಯಾಗಲಿ ದಾರಿತಪ್ಪಿ ಹೋಗಿರುವದನ್ನು ನೀವು ಕಂಡರೆ ಕಾಣದವರಂತೆ ಅದನ್ನು ಬಿಟ್ಟು ಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡುಹೋಗಿ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:1
21 ತಿಳಿವುಗಳ ಹೋಲಿಕೆ  

“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.


ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.


ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.


ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.


ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,


“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?


ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.


ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.


ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.


“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು