Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ಊರಿನ ಹಿರಿಯರು ಅವನನ್ನು ಹಿಡಿಸಿ, ನೂರು ಬೆಳ್ಳಿ ನಾಣ್ಯದ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು; ಮತ್ತು ಅವನು ಆ ಮಹಿಳೆಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಊರಿನ ಹಿರಿಯರು ಅವನನ್ನು ಹಿಡಿಸಿ ಹೊಡಿಸಿ ನೂರು ರೂಪಾಯಿ ದಂಡವನ್ನು ವಿಧಿಸಿ ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವದಕ್ಕೆ ಅವನಿಗೆ ಅಧಿಕಾರವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ನಿಕೆಯ ಹೆಸರನ್ನು ಕೆಡಿಸಿದ್ದರಿಂದ, ಅವನಿಗೆ ನೂರು ಬೆಳ್ಳಿ ಶೆಕೆಲ್‌ಗಳ ದಂಡವನ್ನು ವಿಧಿಸಿ, ಅದನ್ನು ಆ ಹುಡುಗಿಯ ತಂದೆಗೆ ಕೊಡಬೇಕು. ಇದಲ್ಲದೆ ಅವಳು ಅವನಿಗೆ ಹೆಂಡತಿಯಾಗಬೇಕು, ಅವನು ಬದುಕಿರುವವರೆಗೆ ಅವಳನ್ನು ಪರಿತ್ಯಾಗಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:19
6 ತಿಳಿವುಗಳ ಹೋಲಿಕೆ  

ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.


ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.


ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.


ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು