Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ಬೆಳ್ಳಿನಾಣ್ಯ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗ ಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ರೂಪಾಯಿ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವದಕ್ಕೆ ಅವನಿಗೆ ಅಧಿಕಾರವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲೆ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು, ಏಕೆಂದರೆ ಅವನು ಅವಳನ್ನು ಕೆಡಿಸಿದ್ದರಿಂದ, ಬದುಕುವ ದಿವಸಗಳೆಲ್ಲಾ ಅವಳನ್ನು ಪರಿತ್ಯಾಗಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:29
7 ತಿಳಿವುಗಳ ಹೋಲಿಕೆ  

ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.


ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.


ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.


ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,


ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.


ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು