Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಹೆಂಗಸರು ಗಂಡಸರಂತೆ, ಗಂಡಸರು ಹೆಂಗಸರಂತೆ ಬಟ್ಟೆ ಹಾಕಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸ್ತ್ರೀಯು ಪುರುಷವೇಷವನ್ನೂ ಪುರುಷನು ಸ್ತ್ರೀವೇಷವನ್ನೂ ಹಾಕಿಕೊಳ್ಳಕೂಡದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಹೇಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಹೆಂಗಸು ಗಂಡಸರ ಬಟ್ಟೆ ಧರಿಸಿಕೊಳ್ಳಬಾರದು, ಗಂಡಸು ಹೆಂಗಸರ ಬಟ್ಟೆ ಧರಿಸಬಾರದು. ಇದು ಯೆಹೋವನ ದೃಷ್ಟಿಯಲ್ಲಿ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸ್ತ್ರೀಯು ಪುರುಷನ ವಸ್ತ್ರ ಉಟ್ಟುಕೊಳ್ಳಬಾರದು, ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು. ಏಕೆಂದರೆ ಹೀಗೆ ಮಾಡುವವರೆಲ್ಲ ಯೆಹೋವ ದೇವರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:5
4 ತಿಳಿವುಗಳ ಹೋಲಿಕೆ  

ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.


ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.


ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು