ಧರ್ಮೋಪದೇಶಕಾಂಡ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು. ಅಧ್ಯಾಯವನ್ನು ನೋಡಿ |