Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಗೂ ಮತ್ತು ದ್ರಾಕ್ಷಿಬೆಳೆಗೂ ಹೀಗೆ ಆ ತೋಟದ ಬೆಳೆಗೂ ಗತಿಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದ್ರಾಕ್ಷೇತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಯೂ ಮತ್ತು ದ್ರಾಕ್ಷೆಯ ಬೆಳೆಯೂ ಅಂತೂ ಆ ತೋಟದ ಎಲ್ಲಾ ಬೆಳೆಯೂ ದೇವರದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ದ್ರಾಕ್ಷಿತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜವೂ, ಬಿತ್ತಿದ ಬೀಜದ ಪೈರೂ, ದ್ರಾಕ್ಷಿತೋಟದ ಹುಟ್ಟುವಳಿಯೂ ಅಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:9
9 ತಿಳಿವುಗಳ ಹೋಲಿಕೆ  

“‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.


ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,


ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು