ಧರ್ಮೋಪದೇಶಕಾಂಡ 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೂಳೆತನದಿಂದಾಗಲಿ ಗುದಮೈಥುನದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಮಂದಿರದೊಳಗೆ ತರಲೇಬಾರದು; ಈ ಎರಡೂ ಆತನಿಗೆ ಅಸಹ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ. ಅಧ್ಯಾಯವನ್ನು ನೋಡಿ |