Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ, ಬೇರೆ ಯಾವುದನ್ನೇ ಆಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹಣವನ್ನಾಗಲಿ ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವದನ್ನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀವು ಇನ್ನೊಬ್ಬ ಇಸ್ರೇಲಿಗೆ ಸಾಲಕೊಟ್ಟರೆ ಅದಕ್ಕೆ ಬಡ್ಡಿ ವಸೂಲು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವನ್ನಾಗಲಿ, ಬೇರೆ ಯಾವುದನ್ನಾಗಲಿ ಬಡ್ಡಿಗೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:19
11 ತಿಳಿವುಗಳ ಹೋಲಿಕೆ  

ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ.


ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು