Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವುದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿಮ್ಮ ದೇವರಾದ ಯೆಹೋವನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಆತನು ತಪ್ಪದೆ ಅದನ್ನು ವಿಚಾರಿಸುವನು; ತೀರಿಸದೆ ಹೋಗುವದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:21
24 ತಿಳಿವುಗಳ ಹೋಲಿಕೆ  

ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,


ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.


ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.


“ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.


ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.


ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”


ನೀವು ಹರಕೆಮಾಡದಿದ್ದರೆ ದೋಷವೇನೂ ಇರಲಿಲ್ಲ;


ಅಗಲಿದರೆ ಯೆಹೋವನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿ ಅವರ ಮನೆಯವರೊಡನೆ ಒಡಂಬಡಿಕೆ ಮಾಡಿಕೊಂಡು,


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.


ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟಿರುವುನ್ನು ಕೇಳಬಾರದು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು