“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.