Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 ಅವಳು ಮತ್ತೊಬ್ಬನನ್ನು ಮದುವೆ ಆಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತುಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ಅವಳು ಮತ್ತೊಬ್ಬನನ್ನು ಮದುವೆಯಾಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನ ಮನೆಯಿಂದ ಅವಳು ಹೊರಗೆ ಕಳುಹಿಸಲ್ಪಟ್ಟ ಮೇಲೆ ಆಕೆ ಬೇರೊಬ್ಬನನ್ನು ಮದುವೆಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವಳು ಅವನ ಮನೆಯನ್ನು ಬಿಟ್ಟುಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:2
10 ತಿಳಿವುಗಳ ಹೋಲಿಕೆ  

ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.


ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;


ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.


ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.


“ವಿಧವೆಯು ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯು ಇಂತಹ ಪ್ರಮಾಣಮಾಡಿಕೊಂಡರೆ ಅದು ನಿಲ್ಲುವುದು. ಅವಳು ಅದನ್ನು ನೆರವೇರಿಸಬೇಕು.


ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.


ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.


ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.


ಆಕೆ ಎರಡನೆಯ ಗಂಡನಿಂದಲೂ ತಿರಸ್ಕರಿಸಲ್ಪಟ್ಟು, ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಎರಡನೆಯ ಗಂಡನು ಸತ್ತರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು