Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಿಮ್ಮಲ್ಲಿ ಯಾರಿಗಾದರೂ ಚರ್ಮರೋಗವಿದ್ದಲ್ಲಿ ಯಾಜಕನು ಹೇಳುವ ರೀತಿಯನ್ನು ಅನುಸರಿಸಬೇಕು. ನಾನು ಯಾಜಕರಿಗೆ ತಿಳಿಸಿದ ಮೇರೆಗೆ ನೀವು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:8
11 ತಿಳಿವುಗಳ ಹೋಲಿಕೆ  

“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.


ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.


ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.


ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.


ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.


ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”


ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.


ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು