ಧರ್ಮೋಪದೇಶಕಾಂಡ 26:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾವು ಸತ್ತವರಿಗೋಸ್ಕರ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇಮಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾವು ಸತ್ತವರಿಗಾಗಿ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದು ಹಾಕಲಿಲ್ಲ; ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಟ್ಟು ನೀವು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ದುಃಖದಲ್ಲಿರುವಾಗ ಆ ಆಹಾರವನ್ನು ಊಟಮಾಡಲಿಲ್ಲ. ಈ ಬೆಳೆಯನ್ನು ಶೇಖರಿಸುವಾಗ ನಾನು ಅಶುದ್ಧನಾಗಿರಲಿಲ್ಲ. ಸತ್ತವರಿಗಾಗಿ ಈ ಆಹಾರವನ್ನು ಅರ್ಪಿಸಲಿಲ್ಲ. ನನ್ನ ದೇವರಾದ ಯೆಹೋವನೇ, ನಾನು ನಿನ್ನ ಆಜ್ಞೆಗಳಿಗೆ ವಿಧೇಯನಾಗಿದ್ದೇನೆ. ನೀನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ನಾನು ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.