Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:5
28 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.


ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.


ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.


ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.


ನಿಮ್ಮ ಸಂತತಿ ಭೂಮಿಯ ಮೇಲೆ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ, ಬಹು ಜನವಾಗುವಂತೆಯೂ ದೇವರು ನನ್ನನ್ನು ಮೊದಲು ಕಳುಹಿಸಿದನು.


ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.


ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.


ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.


ನನ್ನ ದೇಶದ, ನನ್ನ ಸಂಬಂಧಿಕರೊಳಗಿಂದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡುತ್ತೇನೆ ಎಂದು ಪರಲೋಕದ ಮತ್ತು ಭೂಲೋಕದ ತಂದೆಯಾಗಿರುವ ಯೆಹೋವನ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.


ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.


ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.


ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.


ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.


ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.


ಹಗಲಿನಲ್ಲಿ ಬಿಸಿಲಿನಿಂದಲೂ, ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು, ನಿದ್ದೆಮಾಡುವುದಕ್ಕಾದರೂ ಅವಕಾಶ ಸಿಗಲಿಲ್ಲ, ನನ್ನ ಸ್ಥಿತಿ ಹೀಗಿತ್ತು.


ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.


ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ಅದಲ್ಲದೆ ಅವರು ಫರೋಹನಿಗೆ, “ಕಾನಾನ್‌ ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.


ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.


ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು