Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಇಸ್ರಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆಯು ಇಸ್ರಾಯೇಲ್ಯರ ಹಿರಿಯರ ಸಹಿತ ಜನರಿಗೆ - ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆ ಮತ್ತು ಸಮೂಹದ ಹಿರಿಯರು ಜನರೊಂದಿಗೆ ಮಾತನಾಡಿದರು. ಮೋಶೆಯು ಹೇಳಿದ್ದೇನೆಂದರೆ: “ನಾನು ಆಜ್ಞಾಪಿಸಿದ ಎಲ್ಲಾ ವಿಧಿಗಳನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮೋಶೆ ಮತ್ತು ಇಸ್ರಾಯೇಲಿನ ಹಿರಿಯರು ಜನರಿಗೆ, “ನಾವು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:1
13 ತಿಳಿವುಗಳ ಹೋಲಿಕೆ  

ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.


ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.


ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.


ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.


ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.


ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,


ಯೊರ್ದನ್ ನದಿಯ ಆಚೆ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಎಂಬ ಸ್ಥಳಗಳ ನಡುವೆ, ಅರಣ್ಯದಲ್ಲಿ ಆರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆಯು ಇಸ್ರಾಯೇಲರೆಲ್ಲರಿಗೆ ಮಾಡಿದ ಉಪದೇಶ ಮತ್ತು ಉಪನ್ಯಾಸಗಳು.


ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.


ಆದುದರಿಂದ ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಕೊಳ್ಳಬೇಕೆಂದು ಯೆಹೋವನ ಸಭೆಯಾದ ಸಮಸ್ತ ಇಸ್ರಾಯೇಲರ ಎದುರಿನಲ್ಲಿ ನಮ್ಮ ದೇವರಿಗೆ ಕೇಳಿಸುವಂತೆ ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ದೇಶವು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸ್ವತ್ತಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು