ಧರ್ಮೋಪದೇಶಕಾಂಡ 27:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “‘ಸುಳ್ಳುದೇವರನ್ನು ಮಾಡಿ ಗುಪ್ತ ಸ್ಥಳದಲ್ಲಿಡುವವನು ಶಾಪಗ್ರಸ್ತನಾಗಲಿ; ಆ ದೇವರುಗಳು ಮನುಷ್ಯನ ಕೈಕೆಲಸವೇ; ಕಲ್ಲು, ಮರ, ಹಿತ್ತಾಳೆಗಳಿಂದ ಮಾಡಿದವುಗಳೇ. ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.’ “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.
ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.