Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಲೇವಿಯರು - ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:16
11 ತಿಳಿವುಗಳ ಹೋಲಿಕೆ  

“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.


“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.


“ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು.


“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.


‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು