ಧರ್ಮೋಪದೇಶಕಾಂಡ 27:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು - ಪರದೇಶಿ, ತಾಯಿತಂದೆಯಿಲ್ಲದವ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಲೇವಿಯರು, ‘ಪರದೇಶಸ್ಥರಿಗೆ, ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯವಾದ ತೀರ್ಪನ್ನು ಕೊಡದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.