Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2-3 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ಅಂದರೆ ನಿಮ್ಮ ಪಿತೃಗಳ ದೇವರಾದ ಯೆಹೋವನು ತಾನು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ದೇಶವನ್ನು ಪ್ರವೇಶಿಸುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುವಾಗ ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವುಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಬೇಗನೆ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಪ್ರವೇಶಿಸುವಿರಿ. ಆ ದಿವಸ ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಿ ಅದನ್ನು ಗಾರೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:2
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.


ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.


ಜನರೆಲ್ಲರು ಯೊರ್ದನಿನ ಆಚೆಗೆ ದಾಟಿದ ಮೇಲೆ ಯೆಹೋವನು ಯೆಹೋಶುವನಿಗೆ


“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.


ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ


ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.


ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.


ಮೋಶೆ ಮತ್ತು ಇಸ್ರಾಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ನಿಮಗೆ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.


ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.


ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು


ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು