Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಅವರು, ‘ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು - ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಲೇವಿಯರು, ‘ನಿರಪರಾಧಿಯನ್ನು ಕೊಲ್ಲಲು ಹಣ ತೆಗೆದುಕೊಳ್ಳುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:25
13 ತಿಳಿವುಗಳ ಹೋಲಿಕೆ  

ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.


“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.


“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.


ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು