ಧರ್ಮೋಪದೇಶಕಾಂಡ 28:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು. ಅಧ್ಯಾಯವನ್ನು ನೋಡಿ |
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.