Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ ನಿಮ್ಮ ಎಲ್ಲಾ ವ್ಯವಸಾಯವನ್ನೂ ಸಫಲಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:12
15 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.


ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.


ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.


ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯುವಂತೆ ಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.


ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಸಾಲ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.


ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,


ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ದೇಶದಲ್ಲಿ ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.


ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.


ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ” ಎಂದನು.


ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು