Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13-14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ಹೋಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು; ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13-14 ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ತೊಲಗದೆ ಬೇರೆ ದೇವರುಗಳನ್ನು ಅವಲಂಬಿಸದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಆತನು ಇತರರಿಗೆ ನಿಮ್ಮನ್ನು ಅಧೀನಮಾಡದೆ ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವನು; ನೀವು ಎಲ್ಲರಿಗಿಂತಲೂ ಮೇಲಣವರಾಗಿರುವಿರೇ ಹೊರತು ಕೆಳಗಣವರಾಗಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ನಿಮ್ಮನ್ನು ತಲೆಯನ್ನಾಗಿ ಮಾಡಲು ಬಯಸುತ್ತಾನೆಯೇ ಹೊರತು ಬಾಲವನ್ನಾಗಿಯಲ್ಲ. ನೀವು ಮೇಲಿನ ಅಂತಸ್ತಿನಲ್ಲಿರುವಿರಿ, ಕೆಳಗಿನದರಲ್ಲಿ ಅಲ್ಲ. ನೀವು ಯೆಹೋವನ ಆಜ್ಞೆಯನ್ನು ಪಾಲಿಸಿದಾಗ ನಿಮಗೆ ಹೀಗೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:13
11 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.


ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಸಾಲ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.


ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ. ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು