Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಆಜ್ಞೆ, ಕಟ್ಟಳೆಗಳಿಗೆ ನೀವು ವಿಧೇಯರಾಗದಿದ್ದರೆ ಈ ಕೆಟ್ಟ ಸಂಗತಿಗಳು ನಿಮಗೆ ತಟ್ಟುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:15
31 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಅವು ಯಾವುವೆಂದರೆ:


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.


ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.


ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನು ಹೊಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.


ಈಗ ನೀನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.


ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.


ಯೆಹೋವನು ತಾನು ಮೊದಲೇ ಆಣೆಯಿಟ್ಟು ಹೇಳಿದಂತೆ ಇಸ್ರಾಯೇಲರು ಎಲ್ಲಿ ಹೋದರೂ ಆತನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರು ಬಹು ಕಷ್ಟಗಳಿಗೆ ಗುರಿಯಾದರು.


ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಆದರೆ ನೀವು ದ್ರೋಹಿಗಳಾಗಿ ಯೆಹೋವನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಆರಾಧಿಸಿ,


ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.


ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.


ಇವನೂ, ಇವನ ಸಂತತಿಯವರೂ ಮತ್ತು ಸೇವಕರೂ ನಡೆಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ, ಯೆರೂಸಲೇಮಿನವರನ್ನೂ ಮತ್ತು ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವುದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದುದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’” ಎಂದು ಹೇಳಿದನು.


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.


ಹೊರಟ ಕೂಡಲೆ ಅವರ ಮೇಲೆ ನನ್ನ ಬಲೆಯನ್ನು ಬೀಸಿ, ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಕ್ಕೆ ಎಳೆಯುವೆನು. ಅವರೆಲ್ಲರ ಕಿವಿಗೆ ಬಿದ್ದ ಮಾತಿಗನುಸಾರವಾಗಿ ಅವರನ್ನು ಶಿಕ್ಷಿಸುವೆನು.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ, ಆತನು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.


ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.


ನೀನು ಅವರಿಗೆ, ‘ಯೆಹೋವನು ಇಂತೆನ್ನುತ್ತಾನೆ, ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯಬೇಕೆಂಬ ಮಾತನ್ನು ಕೇಳದೆ,


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು