ಧರ್ಮೋಪದೇಶಕಾಂಡ 28:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮಗೆ ಊರಿನಲ್ಲಿಯೂ ಮತ್ತು ಅಡವಿಯಲ್ಲಿಯೂ ಶಾಪ ಉಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ನಿಮಗೆ ಊರಲ್ಲೂ ಅಡವಿಯಲ್ಲೂ ಅಶುಭವುಂಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮಗೆ ಊರಲ್ಲಿಯೂ ಅಡವಿಯಲ್ಲಿಯೂ ಅಶುಭವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನಿಮ್ಮ ಹೊಲದಲ್ಲಿಯೂ ನೀವು ವಾಸಿಸುವ ಪಟ್ಟಣದಲ್ಲಿಯೂ ಯೆಹೋವನು ನಿಮ್ಮನ್ನು ಶಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮಗೆ ಪಟ್ಟಣದಲ್ಲಿಯೂ ಶಾಪ, ಹೊಲದಲ್ಲಿಯೂ ನಿಮಗೆ ಶಾಪ. ಅಧ್ಯಾಯವನ್ನು ನೋಡಿ |
ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.