Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೇಲೆ ಆಕಾಶವು ಮಳೆಸುರಿಸದೆ ತಾಮ್ರದಂತೆಯೂ ಮತ್ತು ಕೆಳಗೆ ಭೂಮಿಯು ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಮೇಲೆ ಆಕಾಶ ಮಳೆ ಸುರಿಸದೆ ತಾಮ್ರದಂತೆಯೂ ಕೆಳಗೆ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೇಲೆ ಆಕಾಶವು [ಮಳೆಸುರಿಸದೆ] ತಾಮ್ರದಂತೆಯೂ ಕೆಳಗೆ ಭೂವಿುಯು [ಬೆಳೆಕೊಡದೆ] ಕಬ್ಬಿಣದಂತೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಕಾಶವು ಮೋಡಗಳೇ ಇರದ ಕಾದ ಹಿತ್ತಾಳೆಯಂತಿರುವುದು. ಕಾಲಿನ ಅಡಿಯಲ್ಲಿರುವ ನೆಲವು ಕಬ್ಬಿಣದಂತೆ ಗಟ್ಟಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮ ತಲೆಯ ಮೇಲಿರುವ ಆಕಾಶವು ಕಂಚಿನಂತೆಯೂ ಕೆಳಗಿರುವ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:23
8 ತಿಳಿವುಗಳ ಹೋಲಿಕೆ  

ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ಹಾಗು ನೀವು ಸಾಗುವಳಿಮಾಡುವ ಭೂಮಿಯನ್ನು ತಾಮ್ರದಂತೆಯೂ ಮಾಡುವೆನು.


ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ಆತನು ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರಗಳಿಂದಲೂ, ದೇಶವನ್ನು ಕ್ಷಾಮದಿಂದಲೂ ಮತ್ತು ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ನರಳುವಂತೆ ಮಾಡುವನು. ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ನತ್ತುವವು.


ನಿಮ್ಮ ದೇಶದಲ್ಲಿ ಯೆಹೋವನು ಆಕಾಶದಿಂದ ಮಳೆಗೆ ಬದಲಾಗಿ ಧೂಳನ್ನೂ ಮತ್ತು ಉಸುಬನ್ನೂ ನಿಮ್ಮ ಮೇಲೆ ಸುರಿಸುವನು; ಅದುದರಿಂದ ನೀವು ನಾಶವಾಗಿ ಹೋಗುವಿರಿ.


ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು