Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮ ಹೆಣಗಳು ಪಕ್ಷಿಗಳಿಗೂ ಮತ್ತು ಕಾಡು ಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು; ಅವುಗಳನ್ನು ಬೆದರಿಸಿ ಓಡಿಸುವುದಕ್ಕೂ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕಾಡುಪಕ್ಷಿಗಳಿಗೆ ಮತ್ತು ಕಾಡುಪ್ರಾಣಿಗಳಿಗೆ ನಿಮ್ಮ ಹೆಣಗಳು ಆಹಾರವಾಗುವವು. ಅವುಗಳನ್ನು ಓಡಿಸಲು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುದು. ಯಾರೂ ಅವುಗಳನ್ನು ಬೆದರಿಸಿ ಓಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:26
11 ತಿಳಿವುಗಳ ಹೋಲಿಕೆ  

ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು.


ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು