Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ನಿಮ್ಮನ್ನು ಈಜಿಪ್ಟನ್ನು ಬಾಧಿಸುವಂತೆ ಹುಣ್ಣುಗಳಿಂದಲೂ, ಮೂಲವ್ಯಾಧಿಯಿಂದಲೂ, ಕಜ್ಜಿಯಿಂದಲೂ, ಇಸುಬಿನಿಂದಲೂ ನೀವು ವಾಸಿಯಾಗದ ರೋಗಗಳಿಂದ ನಿಮ್ಮನ್ನು ಬಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:27
16 ತಿಳಿವುಗಳ ಹೋಲಿಕೆ  

ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.


ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.


ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ಆಗ ಅದು ಐಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾರ್ಪಟ್ಟು ಅದು ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವವು” ಎಂದು ಹೇಳಿದನು.


ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.


ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.


ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ, ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.


ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.


ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು