Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹುಚ್ಚುತನ, ಕುರುಡುತನ, ಬೆಪ್ಪುತನ ಇವುಗಳಿಂದ ಸರ್ವೇಶ್ವರ ನಿಮ್ಮನ್ನು ಪೀಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಚಿತ್ತಭ್ರಮಣೆ, ಕುರುಡತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆಹೋವನು ನಿಮ್ಮನ್ನು ದಿಗ್ಬ್ರಾಂತರನ್ನಾಗಿ ಮಾಡುವನು; ನಿಮ್ಮನ್ನು ಕುರುಡರನ್ನಾಗಿ ಮಾಡಿ ಗಲಿಬಿಲಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋವ ದೇವರು ನಿಮ್ಮನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಕಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:28
16 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಅರಸನ ಎದೆಯು ಕುಂದುವುದು, ಅಧಿಪತಿಗಳ ಹೃದಯವು ಕುಗ್ಗುವುದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು” ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನ ಆತ್ಮವು ಸೌಲನನ್ನು ಬಿಟ್ಟು ಹೋಯಿತು; ಯೆಹೋವನು ಕಳುಹಿಸಿದ ದುರಾತ್ಮವು ಬಂದು ಅವನನ್ನು ಪೀಡಿಸುತ್ತಿದ್ದರಿಂದ


“‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.


ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.


ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ, ಅವರ ಬಟ್ಟೆಯನ್ನು ಯಾರೂ ಮುಟ್ಟರು.


ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,


ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು