Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷಿತೋಟದ ಬೆಳೆಯು ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 “ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀವು ಮದುವೆಮಾಡಿಕೊಂಡ ಸ್ತ್ರೀಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿಕೊಂಡ ದ್ರಾಕ್ಷೇತೋಟದ ಬೆಳೆಯು ನಿಮಗೆ ದೊರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನೀವು ಮದುವೆಯಾಗಲು ಕನ್ನಿಕೆಯೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವಿರಿ. ಆದರೆ ಬೇರೊಬ್ಬನು ಆಕೆಯನ್ನು ಕೂಡುವನು. ನೀವೊಂದು ಮನೆಯನ್ನು ಕಟ್ಟುವಿರಿ. ಆದರೆ ಬೇರೊಬ್ಬನು ಅದರಲ್ಲಿ ವಾಸಿಸುವನು. ನೀವು ದ್ರಾಕ್ಷಾತೋಟ ಮಾಡಿ ದ್ರಾಕ್ಷಾಲತೆಗಳನ್ನು ನೆಡುವಿರಿ. ಆದರೆ ಅದರ ಫಲಗಳನ್ನು ನೀವು ಕೂಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:30
19 ತಿಳಿವುಗಳ ಹೋಲಿಕೆ  

ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.


ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗಮಿಸಲಿ!


ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ನಮ್ಮ ಸ್ವತ್ತು ಪರರ ಪಾಲಾಗಿದೆ, ನಮ್ಮ ಮನೆಗಳು ಪರರ ಕೈವಶವಾಗಿವೆ.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.


ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.


ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.


ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.


ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.


ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ.


ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು