ಧರ್ಮೋಪದೇಶಕಾಂಡ 28:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಮುಂದೆಯೇ ಬಲಾತ್ಕಾರದಿಂದ ಹಿಡಿದುಕೊಂಡುಹೋಗುವರು. ಕೇಳಿದರೆ ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡು ಮತ್ತು ಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆ ಕೊಯ್ಯುವರು; ಅವುಗಳ ಮಾಂಸವು ನಿಮಗೆ ಸಿಕ್ಕುವದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮೆದುರಾಗಿ ಬಲಾತ್ಕಾರದಿಂದ ಹಿಡಿದುಕೊಂಡುಹೋಗಿ ನಿಮಗೆ ಹಿಂದಕ್ಕೆ ಕೊಡುವದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವವು. ನಿಮಗೆ ರಕ್ಷಕರು ಯಾರೂ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಿಮ್ಮ ದನಗಳನ್ನು ನಿಮ್ಮೆದುರಿನಲ್ಲಿ ಜನರು ಕೊಯ್ಯುವರು. ಆದರೆ ನೀವು ಅದರ ಮಾಂಸವನ್ನು ತಿನ್ನುವುದಿಲ್ಲ. ನಿಮ್ಮ ಕತ್ತೆಗಳನ್ನು ಜನರು ನಿಮ್ಮಿಂದ ತೆಗೆದುಕೊಂಡು ಹೋಗುವರು. ಆದರೆ ಅವುಗಳನ್ನು ಹಿಂದಕ್ಕೆ ಕೊಡರು. ನಿಮ್ಮ ಕುರಿಗಳನ್ನು ವೈರಿಗಳು ಕೊಂಡೊಯ್ಯುವರು. ನಿಮ್ಮನ್ನು ರಕ್ಷಿಸಲು ಯಾರೂ ಬರಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆಯೇ ಕೊಯ್ಯುವರು, ಆದರೆ ನೀವು ಅದರ ಮಾಂಸ ತಿನ್ನುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಕಣ್ಣ ಮುಂದೆಯೇ ಬಲಾತ್ಕಾರದಿಂದ ತೆಗೆದುಕೊಂಡು ಹೋಗುವರು. ಅದು ನಿಮಗೆ ಮತ್ತೆ ಸಿಕ್ಕುವುದಿಲ್ಲ. ನಿಮ್ಮ ಕುರಿಗಳು ನಿಮ್ಮ ಶತ್ರುವಿಗೆ ಕೊಡಲಾಗುವುದು. ಅವುಗಳನ್ನು ಬಿಡಿಸುವುದಕ್ಕೆ ಯಾರೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |