Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯ ವರೆಗೂ ವಾಸಿಯಾಗದ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 “ನಿಮ್ಮ ಮೊಣಕಾಲುಗಳಲ್ಲೂ ತೊಡೆಗಳಲ್ಲೂ ಮತ್ತು ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಸರ್ವೇಶ್ವರ ಹುಟ್ಟಿಸಿ ಬಾಧಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೋವನು ನಿಮ್ಮ ಮೊಣಕಾಲುಗಳಲ್ಲಿಯೂ ತೊಡೆಗಳಲ್ಲಿಯೂ ಮತ್ತು ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಬಾಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:35
8 ತಿಳಿವುಗಳ ಹೋಲಿಕೆ  

ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.


ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.


ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.


ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು