ಧರ್ಮೋಪದೇಶಕಾಂಡ 28:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ. ಅಧ್ಯಾಯವನ್ನು ನೋಡಿ |