Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀವು ಯಾವ ದೇಶಕ್ಕೆ ಕಳುಹಿಸಲ್ಪಡುವಿರೋ ಆ ದೇಶದವರು ನಿಮ್ಮ ದುರವಸ್ಥೆಯನ್ನು ನೋಡಿ ನಗುವರು; ಕೆಟ್ಟಮಾತುಗಳನ್ನಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:37
13 ತಿಳಿವುಗಳ ಹೋಲಿಕೆ  

ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!”


ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”


ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು