Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನಿಮ್ಮ ಮಧ್ಯೆಯಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆ ಆಗುತ್ತಾ ಹೀನಸ್ಥಿತಿಗೆ ಇಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು. ನೀವಾದರೋ ಬಲಹೀನರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:43
18 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೇ ಲಕ್ಷ್ಯವಿಟ್ಟು ಕೇಳಿದರೆ, ನೀವು ಎಲ್ಲರಿಗಿಂತಲೂ ಮೇಲಿನವರಾಗಿರುವಿರೇ ಹೊರತು ಇತರರಿಗೆ ಅಧೀನರಾಗುವುದಿಲ್ಲ.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು.


ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.


‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.


ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.


ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ ನಿನ್ನನ್ನು ಕೆಡವಿ, ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು