Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ರಣಹದ್ದು ಹೇಗೆ ದೂರದಿಂದ ಹಾರಿಬರುವುದೋ ಹಾಗೆಯೇ ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 “ಬಹಳ ದೂರದಿಂದ ಒಂದು ಜನಾಂಗವು ನಿಮ್ಮೊಂದಿಗೆ ಯುದ್ಧಮಾಡಲು ಬರುವಂತೆ ಯೆಹೋವನು ಮಾಡುವನು. ನೀವು ಅವರ ಭಾಷೆಯನ್ನು ಅರಿಯದಿರುವಿರಿ. ಆಕಾಶದಿಂದ ಹದ್ದು ಹಾರಿಬರುವಂತೆ ಅತೀ ವೇಗವಾಗಿ ಅವರು ನಿಮ್ಮ ಮೇಲೆ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:49
26 ತಿಳಿವುಗಳ ಹೋಲಿಕೆ  

ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.


“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.


“ದ್ರೋಹಿ ವಂಶದವರಾದ ಈ ಜನರಿಗೆ ಹೀಗೆ ಹೇಳು, ಇದರ ಅಭಿಪ್ರಾಯವು ನಿಮಗೆ ಗೊತ್ತಿಲ್ಲವೋ? ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಮತ್ತು ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದನು.


“ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.


ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.


ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಬಳಿಗೆ ನಿನ್ನನು ಕಳುಹಿಸುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.


ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.


ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,


ಯಾವುವೆಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ಧತಿ, ಇವೇ.


ಆ ಕಾಲದಲ್ಲಿ ಐಗುಪ್ತದ ನದಿಗಳ ಕಟ್ಟಕಡೆಯಿಂದ ಬರುವ ನೊಣಕ್ಕೂ, ಅಶ್ಶೂರ ದೇಶದ ದುಂಬಿಗಳಿಗೂ ಯೆಹೋವನು ಸಿಳ್ಳುಹಾಕುವನು.


ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.


ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು.


“ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.


ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು