Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ ಮತ್ತು ಚಿಕ್ಕವರೆಂದು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆ ಜನಾಂಗದವರು ಕ್ರೂರಮುಖವುಳ್ಳವರು; ನೀವು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ, ಚಿಕ್ಕವರೆಂದು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆ ಜನಾಂಗದವರು ಕ್ರೂರಮುಖವುಳ್ಳವರಾಗಿ ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ಕನಿಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಅವರು ಮಹಾಕ್ರೂರಿಗಳು. ಅವರು ನಿಮ್ಮಲ್ಲಿರುವ ಮುದುಕರಿಗೆ ಅಥವಾ ಎಳೆಗೂಸುಗಳಿಗೆ ಕರುಣೆ ತೋರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:50
12 ತಿಳಿವುಗಳ ಹೋಲಿಕೆ  

ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.


ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.


ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರವಾಗಿತ್ತು, ಹೆದರಿಸುವಂಥದಾಗಿತ್ತು, ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ನುಂಗುತ್ತಾ, ಚೂರುಚೂರು ಮಾಡುತ್ತಾ ಉಳಿದದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಹಿಂದಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.


ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ,


ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವರ ಸೇವಕರನ್ನೂ ವ್ಯಾಧಿ, ಖಡ್ಗ ಮತ್ತು ಕ್ಷಾಮಗಳಿಂದ ಹತರಾಗದೆ ಉಳಿದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು. ಅವನು ಅವರನ್ನು ಕರುಣಿಸದೆ, ಕನಿಕರದಿಂದ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು