Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 “ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ನಿಮ್ಮ ದೇಶದಲ್ಲೆಲ್ಲಾ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ಮುತ್ತಿಗೆ ಹಾಕುವರು. ನೀವು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿಮ್ಮ ಗೋಡೆಗಳನ್ನು ಕೆಡವಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:52
25 ತಿಳಿವುಗಳ ಹೋಲಿಕೆ  

ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.


“ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.


“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.


ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು.


ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು