ಧರ್ಮೋಪದೇಶಕಾಂಡ 28:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಬಹಳವಾಗಿ ಹಿಂಸಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸೂಕ್ಷ್ಮತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ನರಳುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56-57 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಆ ಭೀಕರ ಇಕ್ಕಟ್ಟಿಗೆ ಸಿಕ್ಕಿಸಿದ ಕಾಲದಲ್ಲಿ ಅಂಗಾಲನ್ನೂ ನೆಲಕ್ಕೆ ಇಡದಷ್ಟು ಕೋಮಲ ಹಾಗು ಸುಕುಮಾರಿಯಾದ ಸ್ತ್ರೀ ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ಗುಟ್ಟಾಗಿ ತಿನ್ನಲಾಶಿಸುವಳು; ಪ್ರಾಣಪ್ರಿಯರಾದ ಗಂಡನಿಗು, ಮಗನಿಗು, ಮಗಳಿಗು ಕೊಡಲಿಚ್ಛಿಸದೆ ಮೋರೆಯನ್ನು ಸಿಂಡರಿಸಿಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56-57 ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಬಹಳವಾಗಿ ಇರಿಕಿಸುವ ಕಾಲದಲ್ಲಿ ಕೋಮಲತೆಯ ಮತ್ತು ಅತಿಸುಕುಮಾರತೆಯ ದೆಸೆಯಿಂದ ಅಂಗಾಲನ್ನೂ ನೆಲಕ್ಕೆ ಇಡದವಳಾದ ಸ್ತ್ರೀಯು ತಿನ್ನಲಿಕ್ಕೆ ಏನೂ ಇಲ್ಲದವಳಾಗಿ ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ರಹಸ್ಯವಾಗಿ ತಿನ್ನಬೇಕೆಂದು ಪ್ರಾಣಪ್ರಿಯರಾದ ಗಂಡನಿಗೂ ಮಗನಿಗೂ ಮಗಳಿಗೂ ಮೋರೆಯನ್ನು ಕಪ್ಪುಮಾಡಿಕೊಳ್ಳವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 “ನಿಮ್ಮಲ್ಲಿರುವ ಅತ್ಯಂತ ಮೃದುವಾದ ಮತ್ತು ಕನಿಕರವುಳ್ಳ ಸ್ತ್ರೀಯೂ ಕ್ರೂರಿಯಾಗುವಳು. ನೆಲದ ಮೇಲೆ ಬರಿಗಾಲಿನಲ್ಲಿ ಎಂದೂ ನಡೆಯದಷ್ಟು ಮೃದುವೂ ಕೋಮಲೆಯೂ ಆಗಿದ್ದ ಆಕೆ ತನ್ನನ್ನು ಬಹಳವಾಗಿ ಪ್ರೀತಿಸುವ ಗಂಡನಿಗೇ ಕ್ರೂರಿಯಾಗುವಳು; ಅವಳು ತನ್ನ ಸ್ವಂತ ಮಗನಿಗೂ ಮಗಳಿಗೂ ಕ್ರೂರಿಯಾಗುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವಳೂ, ಬಹಳ ಸೂಕ್ಷ್ಮ ಗುಣವುಳ್ಳವಳೂ, ನೆಲಕ್ಕೆ ಅಂಗಾಲನ್ನು ಸಹ ಇಡದ ಮಹಿಳೆಯು, ತನ್ನ ಮಗ್ಗುಲಲ್ಲಿರುವ ಗಂಡನ ಕಡೆಗೂ ಹೆತ್ತ ಪುತ್ರಪುತ್ರಿಯರ ಕಡೆಗೂ ಕಠಿಣವಾಗಿರುವಳು. ಅಧ್ಯಾಯವನ್ನು ನೋಡಿ |
ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.