Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ನೀವು ಹೆದರಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರುಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಅಂಟಿಕೊಂಡೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ನೀವು ಅಂಜಿಕೊಳ್ಳುತ್ತಿದ್ದ ಈಜಿಪ್ಟ್ ದೇಶದ ರೋಗಗಳನ್ನೆಲ್ಲ ಮತ್ತೆ ನಿಮ್ಮ ಮೇಲೆ ಬರಮಾಡುವರು; ಅವು ನಿಮಗೆ ಅಂಟಿಕೊಂಡೇ ಇರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ನೀವು ಅಂಜಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರಿಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಹತ್ತಿಕೊಂಡೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ನೀವು ಈಜಿಪ್ಟಿನಲ್ಲಿರುವಾಗ ದೇವರು ಅವರಿಗೆ ಕಳುಹಿಸಿದ ವ್ಯಾಧಿಸಂಕಟಗಳನ್ನು ನೋಡಿ ಭಯಗ್ರಸ್ತರಾದಿರಿ. ಅಂಥ ಸಂಕಟಗಳು ನಿಮಗೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಇದಲ್ಲದೆ ನೀವು ಹೆದರಿಕೊಳ್ಳುತ್ತಿದ್ದ ಈಜಿಪ್ಟಿನ ರೋಗಗಳನ್ನೆಲ್ಲಾ ದೇವರು ತಿರುಗಿ ನಿಮ್ಮ ಮೇಲೆ ಬರಮಾಡುವರು; ಅವು ನಿಮ್ಮನ್ನು ಅಂಟಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:60
6 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಆತನು ನಿಮಗೂ, ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.


“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು