Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:63 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವದರಲ್ಲಿಯೂ ಹೆಚ್ಚಿಸುವದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವದರಲ್ಲಿ ಸಂತೋಷಪಟ್ಟು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 “ಯೆಹೋವನು ನಿಮ್ಮ ಅಭಿವೃದ್ದಿಯಲ್ಲಿ ಸಂತೋಷಪಡುವಂತೆ ನಿಮ್ಮ ಅವನತಿಯಲ್ಲಿಯೂ ನಿಮ್ಮ ನಾಶನದಲ್ಲಿಯೂ ಸಂತೋಷಪಡುವನು. ನೀವು ಆ ದೇಶವನ್ನು ನಿಮ್ಮದನ್ನಾಗಿಸಿಕೊಳ್ಳಲು ಹೋಗುವಿರಿ. ಆದರೆ ಜನರು ನಿಮ್ಮನ್ನು ದೇಶದಿಂದ ಹೊರಡಿಸಿ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:63
29 ತಿಳಿವುಗಳ ಹೋಲಿಕೆ  

ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.


ಮತ್ತು ನಿಮ್ಮ ದೇವರಾದ ಯೆಹೋವನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ ನಿಮಗೆ ಮೇಲನ್ನು ಉಂಟುಮಾಡುವನು.


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.


ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.


ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ಅಥವಾ ರಾಜ್ಯವನ್ನಾಗಲಿ ಕಿತ್ತು, ಕೆಡವಿ ನಾಶಪಡಿಸಬೇಕೆಂದು ಅಪ್ಪಣೆಕೊಟ್ಟಾಗ,


ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪಸ್ವಲ್ಪವಾಗಿ ಹೊರಟು ಹೋಗುವಂತೆ ಮಾಡುವನು. ನೀವು ಅವರನ್ನು ಒಂದೇ ಬಾರಿಗೆ ನಿರ್ಮೂಲಮಾಡಬಾರದು. ಹಾಗೆ ಮಾಡಿದರೆ ಕಾಡುಮೃಗಗಳು ಹೆಚ್ಚಿ ಅವು ನಿಮಗೆ ತೊಂದರೆಯನ್ನು ಉಂಟುಮಾಡುತ್ತವೆ.


ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.


ನೀನು ಒಳ್ಳೆಯವನು, ಒಳ್ಳೆಯದನ್ನು ಮಾಡುವವನೂ ಆಗಿದ್ದಿ, ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.


ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.


ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು