Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:64 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 “ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು; ಅಲ್ಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:64
27 ತಿಳಿವುಗಳ ಹೋಲಿಕೆ  

ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.


ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;


ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ಮತ್ತು ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯುವನು; ಅಲ್ಲಿ ನೀವು ಮರದ ದೇವರುಗಳನ್ನೂ ಮತ್ತು ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ಅವರು ತಮಗೆ ನೇಮಿಸಲ್ಪಡದೆಯೂ ಮತ್ತು ಗೊತ್ತಿಲ್ಲದೆಯೂ ಇದ್ದ ಇತರ ದೇವರುಗಳನ್ನು ಸೇವಿಸಿ ಪೂಜಿಸಿದ್ದರಿಂದ,


ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.


ಹೋಶೇಯನ ಆಳ್ವಿಕೆಯ ಒಂಭತ್ತನೆಯ ವರ್ಷದಲ್ಲಿ, ಅಶ್ಶೂರದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು, ಎಲ್ಲಾ ಇಸ್ರಾಯೇಲರನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ಒಯ್ದನು. ಅವರನ್ನು ಹಲಹು ಪ್ರಾಂತ್ಯದಲ್ಲಿಯೂ, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ್ಯದಲ್ಲಿಯೂ, ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ತಿನ್ನತಕ್ಕ ಕುರಿಗಳನ್ನೋ ಎಂಬಂತೆ ನಮ್ಮನ್ನು ವಂಚಕರಿಗೆ ಒಪ್ಪಿಸಿದಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀ.


ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.


ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.


ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”


ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.


ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”


ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.


“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವ ಪ್ರಕಾರ, ಇಸ್ರಾಯೇಲರನ್ನು ಸಕಲ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕು” ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ, ಎಂದು ಅಪ್ಪಣೆ ಕೊಡುವೆನು.


ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು