ಧರ್ಮೋಪದೇಶಕಾಂಡ 28:65 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವದಕ್ಕೂ ಸ್ಥಳ ಸಿಕ್ಕುವದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ ದಿಕ್ಕು ತೋರದೆ ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್65 “ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು. ಅಧ್ಯಾಯವನ್ನು ನೋಡಿ |