ಧರ್ಮೋಪದೇಶಕಾಂಡ 28:68 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201968 ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)68 ನೀವು ಈಜಿಪ್ಟ್ ದೇಶವನ್ನು ಮರಳಿ ಎಂದಿಗೂ ನೋಡುವುದಿಲ್ಲವೆಂದು ಸರ್ವೇಶ್ವರ ಹೇಳಿದ್ದರೂ ಅವರು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗಮಾಡುವರು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನೇ ಗಂಡು ಹೆಣ್ಣು ಎನ್ನದೆ ಗುಲಾಮರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)68 ನೀವು ಐಗುಪ್ತದೇಶವನ್ನು ತಿರಿಗಿ ಎಂದಿಗೂ ನೋಡುವದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರಿಗಿ ಹೋಗಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್68 ಯೆಹೋವನು ನಿಮ್ಮನ್ನು ಹಡಗುಗಳ ಮುಖಾಂತರ ಈಜಿಪ್ಟಿಗೆ ಕೊಂಡೊಯ್ಯುವನು. ನೀವು ಅಲ್ಲಿಗೆ ಹೋಗುವುದೇ ಇಲ್ಲವೆಂದು ನಾನು ಹೇಳಿದ್ದೆನು. ಆದರೆ ದೇವರು ನಿಮ್ಮನ್ನು ಅಲ್ಲಿಗೆ ಕಳುಹಿಸುವನು. ಈಜಿಪ್ಟಿನಲ್ಲಿ ನಿಮ್ಮನ್ನು ನೀವೇ ಗುಲಾಮರನ್ನಾಗಿ ನಿಮ್ಮ ವೈರಿಗಳಿಗೆ ಮಾರಿಕೊಳ್ಳುವಿರಿ; ಆದರೆ ಯಾರೂ ನಿಮ್ಮನ್ನು ಕೊಂಡುಕೊಳ್ಳುವವರಿರುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ68 ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ. ಅಧ್ಯಾಯವನ್ನು ನೋಡಿ |