Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ಮತ್ತು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮ್ಮ ಕಣಜಗಳನ್ನು ಆಶೀರ್ವದಿಸುವನು. ನೀವು ಮಾಡುವ ಕಾರ್ಯಗಳನ್ನೆಲ್ಲಾ ಆಶೀರ್ವದಿಸುವನು. ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ನಿಮ್ಮನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:8
22 ತಿಳಿವುಗಳ ಹೋಲಿಕೆ  

ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.


ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.


ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.


‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?


ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.


ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.


ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”


ನಮ್ಮ ಕಣಜಗಳು ಸಕಲವಿಧವಾದ ಧಾನ್ಯಗಳಿಂದ ತುಂಬಿರುವವು, ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುವವು.


ಅರಸನು ಆಕೆಗೆ, “ಯೆಹೋವನು ನಿನ್ನನ್ನು ರಕ್ಷಿಸದಿದ್ದರೆ ನಾನು ಹೇಗೆ ರಕ್ಷಿಸಬಹುದು? ಕಣದಲ್ಲಾಗಲಿ, ದ್ರಾಕ್ಷಿ ಆಲೆಯಲ್ಲಾಗಲಿ ಏನಾದರೂ ಉಂಟೋ” ಎಂದು ಕೇಳಿ,


ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.


ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,


ನಿಮ್ಮ ವಿರುದ್ಧವಾಗಿ ಬರುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಯೆಹೋವನು ಮಾಡುವನು; ಅವರು ಒಂದೇ ದಾರಿಯಿಂದ ನಿಮ್ಮ ವಿರುದ್ಧವಾಗಿ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.


ನೀವು ದುರ್ನಡತೆಯುಳ್ಳವರಾಗಿ ಯೆಹೋವನನ್ನು ಬಿಟ್ಟಿದ್ದರಿಂದ ಆತನು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿಯೂ ವಿಪತ್ತು, ಕಳವಳ, ಶಾಪ ಇವುಗಳನ್ನು ಉಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವನು.


ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು