ಧರ್ಮೋಪದೇಶಕಾಂಡ 29:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12-13 ನೀವೆಲ್ಲರೂ ಈ ಹೊತ್ತು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿರುವದಕ್ಕೆ ಕಾರಣವೇನಂದರೆ - ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆಯೂ ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ವಾಗ್ದಾನಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವದಕ್ಕೋಸ್ಕರ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವವನಾಗಿದ್ದಾನೆ; ನೀವು ಅದಕ್ಕೆ ಸೇರುವದಕ್ಕಾಗಿ ಕೂಡಿಬಂದಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವೆಲ್ಲಾ ನಿಮ್ಮ ದೇವರಾದ ಯೆಹೋವನೊಂದಿಗೆ ಒಡಂಬಡಿಕೆಯನ್ನು ಮಾಡುವುದಕ್ಕೋಸ್ಕರ ನಿಂತಿದ್ದೀರಿ. ದೇವರು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ. ಅಧ್ಯಾಯವನ್ನು ನೋಡಿ |