Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:19
33 ತಿಳಿವುಗಳ ಹೋಲಿಕೆ  

ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ


ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.


ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.


ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,


ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.


ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,


ಹೀಗೆ ನಿಮ್ಮೆಲ್ಲರ ಸಂಗಡ ಈ ಹೊತ್ತು ನಿಮ್ಮ ದೇವರಾದ ಯೆಹೋವನು ಪ್ರಮಾಣಪೂರ್ವಕವಾಗಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಾನೆ. ನೀವು ಅದರಲ್ಲಿ ಸೇರುವುದಕ್ಕಾಗಿ ಕೂಡಿಬಂದಿದ್ದೀರಿ. ನಿಮ್ಮ ದೇವರಾದ ಯೆಹೋವನು ನಿಮಗೆ ಹೇಳಿದಂತೆ,


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ ಅಥವಾ ಸ್ತ್ರೀಯಾಗಲಿ ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ,


ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.


‘ಇಸ್ರಾಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯಿದೆ ಎಂಬ ದರ್ಶನಗಳನ್ನು ನೀವು ಕಂಡು ಯೆರೂಸಲೇಮಿನ ವಿಷಯವಾಗಿ ಪ್ರವಾದಿಸಿದ್ದೀರಲ್ಲವೆ? ಗೋಡೆಯು ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು’” ಇದು ಕರ್ತನಾದ ಯೆಹೋವನ ನುಡಿ.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗ, ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.


ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.


ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


“ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.


ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು